ನವದೆಹಲಿ :ದೇಶದಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನೆಲೆ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬಗಳು ತಮ್ಮ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿ ಸಾಗುವ ದುಃಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಹಾರ, ನೀರು, ಆಶ್ರಯ ಮತ್ತು ತುರ್ತು ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.