ಕರ್ನಾಟಕ

karnataka

ETV Bharat / bharat

ದೆಹಲಿ ಗಡಿಗಳಿಂದ ಪ್ರತಿಭಟನಾನಿರತ ರೈತರ ತೆರವುಗೊಳಿಸುವಂತೆ ಸುಪ್ರೀಂಗೆ ಅರ್ಜಿ.. ಡಿ.16ಕ್ಕೆ ವಿಚಾರಣೆ - 'ದೆಹಲಿ ಚಲೋ' ಪ್ರತಿಭಟನೆ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್​ ಹಾಗೂ ಹರಿಯಾಣ ರೈತರು ಕಳೆದ 18 ದಿನಗಳಿಂದ 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಭಾಗಗಳಲ್ಲೇ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಪಟ್ಟುಬಿಡದ ರೈತರು ಹಗಲು-ರಾತ್ರಿ ಧರಣಿ ಮುಂದುವರೆಸಿದ್ದಾರೆ..

SC
ಸುಪ್ರೀಂ ಕೋರ್ಟ್

By

Published : Dec 14, 2020, 10:39 AM IST

ನವದೆಹಲಿ :ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅಲ್ಲಿಂದ ತೆರವುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್​ 16ರಂದು ಸುಪ್ರೀಂಕೋರ್ಟ್​ ನಡೆಸಲಿದೆ.

ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಹೀಗೆ ದೊಡ್ಡ ಮಟ್ಟದಲ್ಲಿ ಗುಂಪುಗೂಡಿ ಧರಣಿ ನಡೆಸುವುದು ಕೋವಿಡ್​ ಕೇಸ್​ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ, ನ್ಯಾ.ಎ ಎಸ್ ಬೋಪಣ್ಣ ಮತ್ತು ನ್ಯಾ. ವಿ ರಾಮಸುಬ್ರಮಣಿಯನ್ ಡಿ.16ಕ್ಕೆ ನಡೆಸಲಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಸಾವು

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್​ ಹಾಗೂ ಹರಿಯಾಣ ರೈತರು ಕಳೆದ 18 ದಿನಗಳಿಂದ 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಭಾಗಗಳಲ್ಲೇ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಪಟ್ಟುಬಿಡದ ರೈತರು ಹಗಲು-ರಾತ್ರಿ ಧರಣಿ ಮುಂದುವರೆಸಿದ್ದಾರೆ.

ABOUT THE AUTHOR

...view details