ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಓರ್ವ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.
'ನಿರ್ಭಯಾ' ಪ್ರಕರಣ: ಅಪರಾಧಿ ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆ ಇಂದು
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್, ಸುಪ್ರೀಂ ಕೋರ್ಟ್ ನೀಡಿರುವ ಮರಣ ದಂಡನೆ ತೀರ್ಪು ಮರುಪರಿಶೀಲನೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.
2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್, ಸುಪ್ರೀಂ ಕೋರ್ಟ್ ನೀಡಿರುವ ಮರಣ ದಂಡನೆ ತೀರ್ಪು ಮರುಪರಿಶೀಲನೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದಾನೆ. ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಆರೋಪ ಸಾಬೀತಾಗಿ, ಕಳೆದ ವರ್ಷ ಅಪರಾಧಿಗಳಿಗೆ ಸರ್ವೋಚ್ಛ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಇನ್ನೊಂದೆಡೆ ವಕೀಲ ಸಂಜೀವ್ ಕುಮಾರ್, ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡಾ ಇಂದೇ ನಡೆಯಲಿದೆ.