ಕರ್ನಾಟಕ

karnataka

ETV Bharat / bharat

ಎಸ್‌ಸಿ/ಎಸ್‌ಟಿ ತಿದ್ದುಪಡಿ ಕಾಯ್ದೆ 2018ರ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​ - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ತಿದ್ದುಪಡಿ ಕಾಯ್ದೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ತಿದ್ದುಪಡಿ ಕಾಯ್ದೆ, 2018 ನನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್​ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡಸಿದ ಸುಪ್ರೀಂಕೋರ್ಟ್​, ಕಾಯ್ದೆಯನ್ನ ಎತ್ತಿ ಹಿಡಿದಿದೆ.

SC verdict
ಸುಪ್ರೀಂಕೋರ್ಟ್

By

Published : Feb 10, 2020, 12:44 PM IST

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ / ಎಸ್‌ಟಿ) (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ, 2018 ನನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ತೀರ್ಪು ನೀಡಿರುವ ಕೋರ್ಟ್​ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದಿದೆ.ಎಸ್‌ಸಿ/ ಎಸ್‌ಟಿಗಳ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗೆ ನಿರೀಕ್ಷಿತ ಜಾಮೀನು ನೀಡುವ ಕುರಿತ ಗೊಂದಲಗಳ ಹಿನ್ನೆಲೆಯಲ್ಲಿ ಈ ಅರ್ಜಿಯನ್ನ ಸಲ್ಲಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಅರುಣ್​ ಮಿಶ್ರಾ ನೇತೃತ್ವದ ಪೀಠ, ಎಫ್​ಐಆರ್​​​ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆ ನಡೆಸುವ ಅವಶ್ಯಕತೆ ಇಲ್ಲ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಒಪ್ಪಿಗೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ / ಎಸ್‌ಟಿ) (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ, 2018ರ ಸಿಂಧುತ್ವ ಎತ್ತಿ ಹಿಡಿದ ನ್ಯಾಯಮೂರ್ತಿಗಳು, ಮೇಲ್ನೋಟಕ್ಕೆ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಕಂಡು ಬಂದಾಗ ಮಾತ್ರ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ತೀರ್ಪಿನಲ್ಲಿ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ವಿನೀತ್ ಸರನ್ ಮತ್ತು ರವೀಂದ್ರ ಭಟ್ ಅವರ ನ್ಯಾಯಪೀಠವು ಈ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪು ಪ್ರಕಟಿಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನ್ಯಾಯಪೀಠವು ಎಸ್‌ಸಿ / ಎಸ್‌ಟಿ ಕಾಯ್ದೆಯಲ್ಲಿ ಕೇಂದ್ರ ಮಾಡಿದ ತಿದ್ದುಪಡಿಗಳನ್ನು ಪರಿಶೀಲಿಸಿ, ನಿರೀಕ್ಷಿತ ಜಾಮೀನು ನಿಷೇಧಿಸುವುದಾಗಿ ಹೇಳಿತ್ತು.

ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ದೂರಿನ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಪೊಲೀಸರು ಪ್ರಾಥಮಿಕ ತನಿಖೆ ನಡೆಸಬಹುದು ಎಂದು ಅಪೆಕ್ಸ್ ಕೋರ್ಟ್ ತಿಳಿಸಿತ್ತು. ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಪ್ರೈಮಾ ಫೇಸಿ ಪ್ರಕರಣಗಳಿಗೆ ಮಾತ್ರ ಜಾಮೀನು ನೀಡಬಹುದೆಂದು ಈ ಹಿಂದೆ ಜಾರಿಗೆ ಬಂದ ಸಂವಿಧಾನ ಪೀಠದ ತೀರ್ಪಿನಲ್ಲಿ ನ್ಯಾಯಪೀಠವು ಹೇಳಿತ್ತು.

ABOUT THE AUTHOR

...view details