ಕೇರಳ/ಮಲಪ್ಪುರಂ: ವಿವಿಧ ಬಗೆಯ ಸಿಹಿತಿಂಡಿಗಳನ್ನು ರಸ್ತೆ ಬದಿ ನಿಂತು ಮಾರಾಟ ಮಾಡುವ ಮೂಲಕ ನೆರೆ ಸಂತ್ರಸ್ತರ ಸಹಾಯಕ್ಕೆ ವೆಂಗರ ಪರಪ್ಪೂರ್ ಎಎಂಎಲ್‌ಪಿ ಶಾಲೆಯ ವಿದ್ಯಾರ್ಥಿಗಳು ಮುಂದಾದ್ದು, ಸಂಗ್ರಹಿಸಿರುವ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ತಿಳಿಸಿದ್ದಾರೆ.
ವಿವಿಧ ಬಗೆಯೆ ಸಿಹಿ ತಿಂಡಿ ತಿನಿಸುಗಳನ್ನು ಪುಟ್ಟ ಮಕ್ಕಳು ಮಾರಾಟ ಮಾಡಿ, ಅದರಿಂದ ಬಂದ ಹಣವನ್ನು ದೇಣಿಗೆ ರೂಪದಲ್ಲಿ ಸಂತ್ರಸ್ತರಿಗೆ ನೀಡುತ್ತಿದ್ದಾರೆ. ವೆಂಗರ-ಕೊಟ್ಟಕ್ಕಲ್ ಮಾರ್ಗದಲ್ಲಿರುವ ಕುಮಂಕಲ್ ಸೇತುವೆ ಬಳಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವೆಂಗರ ಎಸ್ ಐ ಮುಹಮ್ಮದ್ ರಫೀಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.