ಕೋಲ್ಕತ್ತಾ:ದೇಶದಲ್ಲಿ ಏಪ್ರಿಲ್ 30ರವರೆಗೆ ಲಾಕ್ಡೌನ್ ಮುಂದುವರಿಕೆಯಾಗಿದ್ದು, ಪ್ರಧಾನಿ ನರೇಂದ್ರ ಜತೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ಮಹತ್ವದ ನಿರ್ಧಾರ ಹೊರಹಾಕುತ್ತಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಏಪ್ರಿಲ್ 30ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಯಲಿದ್ದು, ಜೂನ್ 10ರವರೆಗೆ ಶಾಲಾ-ಕಾಲೇಜ್ ಬಂದ್ ಇರಲಿವೆ ಎಂಬ ಮಾಹಿತಿ ನೀಡಿದ್ದಾರೆ.
ಪ.ಬಂಗಾಳದಲ್ಲಿ ಏ.30ರವರೆಗೆ ಲಾಕ್ಡೌನ್ ವಿಸ್ತರಣೆ ರಾಜ್ಯದಲ್ಲಿನ 9-10 ಆಸ್ಪತ್ರೆಗಳಲ್ಲಿ ಹೆಚ್ಚಿನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಕಳೆದ ಮೂರು ವಾರಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿವೆ. ನಾವು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಬದ್ಧವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇಲ್ಲಿಯವರೆಗೆ 95 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇಂದು ಕೂಡ 6 ಹೊಸ ಪ್ರಕರಣ ಕಂಡು ಬಂದಿವೆ ಎಂದು ತಿಳಿಸಿದರು.