ಕರ್ನಾಟಕ

karnataka

ETV Bharat / bharat

ಸೋಲಿನ ಹೊಣೆ ಹೊತ್ತು ದೂರ ಸರಿದ ರಾಹುಲ್​ ಪರಮಾಪ್ತರು..! -

ರಾಹುಲ್‌ ಗಾಂಧಿಯ ಪರಮಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್​ ಅಧ್ಯಕ್ಷ ಮಿಲಿಂದ್‌ ಡಿಯೋರಾ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಾಂದರ್ಭಿಕ ಚಿತ್ರ

By

Published : Jul 7, 2019, 6:17 PM IST

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜಕೀಯ ಹೈಡ್ರಾಮ ಸೃಷ್ಟಿಸಿದ ಬೆನ್ನಲ್ಲೇ ಹೈಕಮಾಂಡ್​ನಲ್ಲಿಯೂ ರಾಜೀನಾಮೆ ಪರ್ವ ಮುಂದುವರಿದಿದೆ.

ರಾಹುಲ್‌ ಗಾಂಧಿಯ ಪರಮಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್​ ಅಧ್ಯಕ್ಷ ಮಿಲಿಂದ್‌ ಡಿಯೋರಾ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

'ಜನಮತವನ್ನು ಸ್ವೀಕರಿಸಿ ಸೋಲಿನ ಹೊಣೆ ಹೊತ್ತು ನಾನು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಪತ್ರವನ್ನು ರಾಹುಲ್ ಗಾಂಧಿ ಅವರಿಗೆ ಕಳಿಸಲಾಗಿದೆ' ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

'ನನ್ನ ಮೇಲೆ ನಂಬಿಕೆಯಿಟ್ಟು ನನಗೆ ಜವಾಬ್ದಾರಿ ವಹಿಸಿದ ಮತ್ತು ಪಕ್ಷದ ಸೇವೆ ಸಲ್ಲಿಸಲು ಅವಕಾಶ ಕೊಟ್ಟ ರಾಹುಲ್ ಗಾಂಧಿಗೆ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details