ಕರ್ನಾಟಕ

karnataka

ETV Bharat / bharat

ಎಸ್​ಸಿಒ ಸಭೆಯಲ್ಲಿ ಚೀನಾ ರಕ್ಷಣಾ ಸಚಿವರ ಭೇಟಿಗೆ ಭಾರತ ನಕಾರ! - ಚೀನಾ

ಎಸ್‌ಸಿಒ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ರಾಜನಾಥ್​ ಸಿಂಗ್ ಮಾಸ್ಕೋಗೆ ತೆರಳಿದ್ದಾರೆ. ಸಿಂಗ್ ಮೂರು ದಿನಗಳ ಕಾಲ ರಷ್ಯಾ ಪ್ರವಾಸದಲ್ಲಿರುತ್ತಾರೆ. ಸೆಪ್ಟೆಂಬರ್ 4ರಂದು ನಡೆಯಲಿರುವ ಎಸ್‌ಸಿಒ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ರಷ್ಯಾದ ರಕ್ಷಣಾ ಸಚಿವ ಸೆರ್ಗೆ ಶೋಯಿಗು ಮತ್ತು ಇತರ ಹಲವಾರು ಉನ್ನತಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸೆಪ್ಟೆಂಬರ್ 5ರ ಸಂಜೆ ಮಾಸ್ಕೋದಿಂದ ಭಾರತಕ್ಕೆ ಹಿಂತಿರುಗಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

By

Published : Sep 2, 2020, 11:57 AM IST

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಭಾಗಿಯಾಗುತ್ತಿದ್ದು, ಈ ಸಭೆಯಲ್ಲಿ ಚೀನಾದ ಪ್ರತಿನಿಧಿಯನ್ನು ಅವರು ಭೇಟಿಯಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಎಸ್‌ಸಿಒ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಸಿಂಗ್ ಮಾಸ್ಕೋಗೆ ತೆರಳಿದ್ದಾರೆ. ಸಿಂಗ್ ಮೂರು ದಿನಗಳ ಕಾಲ ರಷ್ಯಾ ಪ್ರವಾಸದಲ್ಲಿರುತ್ತಾರೆ. ಸೆಪ್ಟೆಂಬರ್ 4ರಂದು ನಡೆಯಲಿರುವ ಎಸ್‌ಸಿಒ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ರಷ್ಯಾದ ರಕ್ಷಣಾ ಸಚಿವ ಸೆರ್ಗೆ ಶೋಯಿಗು ಮತ್ತು ಇತರ ಹಲವಾರು ಉನ್ನತಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸೆಪ್ಟೆಂಬರ್ 5ರ ಸಂಜೆ ಮಾಸ್ಕೋದಿಂದ ಭಾರತಕ್ಕೆ ಹಿಂತಿರುಗಲಿದ್ದಾರೆ.

ಎಸ್‌ಸಿಒ ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ಜನರಲ್ ವೀ ಫೆಂಗ್ ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಆದರೆ ಈ ಸಭೆಯಲ್ಲಿ ರಾಜನಾಥ್​ ಸಿಂಗ್​ ಚೀನಾ ರಕ್ಷಣಾ ಸಚಿವರನ್ನು ಭೇಟಿ ಮಾಡುವುದಿಲ್ಲ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಪೂರ್ವ ಲಡಾಖ್‌ನ ಪಂಗೊಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ಯಥಾಸ್ಥಿತಿ ಬದಲಿಸಲು ಚೀನಾ ಸೇನೆಯು ವಿಫಲ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾ ನಡುವೆ ಹೊಸ ಕಂದಕ ಸೃಷ್ಟಿಯಾಗಿದೆ.

ಮೇ 5ರಂದು ಪ್ರಾರಂಭವಾದ ಗಡಿ ವಿವಾದಕ್ಕೆ ಅಂತ್ಯ ಹಾಡಲು ಉಭಯ ರಾಷ್ಟ್ರಗಳು ಹಲವಾರು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳನ್ನು ನಡೆಸಿವೆ.

ಭಾರತ ಮತ್ತು ಚೀನಾ ಗಡಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಮತ್ತು ಪ್ರಾದೇಶಿಕ ಸ್ಥಿರತೆಗೆ ಉಭಯ ದೇಶಗಳ ನಡುವಿನ 'ರಚನಾತ್ಮಕ' ಸಂಬಂಧ ಮುಖ್ಯವಾಗಿದೆ ಎಂದು ರಷ್ಯಾ ಈಗಾಗಲೇ ಹೇಳಿದೆ. ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ವಿರುದ್ಧ ಸೋವಿಯತ್ ರಷ್ಯಾ ಜಯ ಗಳಿಸಿದ 75ನೇ ವರ್ಷಾಚರಣೆಯ ನೆನಪಿಗಾಗಿ ಜೂನ್ 24ರಂದು ಮಾಸ್ಕೋದಲ್ಲಿ ನಡೆದ ವಿಜಯ ದಿನದ ಮೆರವಣಿಗೆಯಲ್ಲಿ ಈ ಹಿಂದೆ ಸಿಂಗ್​ ಭಾರತವನ್ನು ಪ್ರತಿನಿಧಿಸಿದ್ದರು.

ಸೆಪ್ಟೆಂಬರ್ 10ರಂದು ನಡೆಯಲಿರುವ ಎಸ್‌ಸಿಒ ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ರಷ್ಯಾ ಆಹ್ವಾನಿಸಿದೆ. ರಷ್ಯಾದ ರಕ್ಷಣಾ ಸಚಿವ ಶೋಯಿಗು ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಸಿಂಗ್ ಭಾರತೀಯ ಸಶಸ್ತ್ರ ಪಡೆಗಳಿಗೆ ವಿವಿಧ ಶಸ್ತ್ರಾಸ್ತ್ರಗಳು ಮತ್ತು ಬಿಡಿ ಭಾಗಗಳನ್ನು ಶೀಘ್ರವಾಗಿ ಪೂರೈಸುವಂತೆ ಒತ್ತಾಯಿಸುವ ಸಾಧ್ಯತೆ ಇದೆ.

ಇನ್ನು ಭಾರತದಲ್ಲಿ ಎಕೆ 203 ರೈಫಲ್‌ಗಳನ್ನು ತಯಾರಿಸುವ ದೀರ್ಘಾವಧಿಯ ಪ್ರಸ್ತಾಪವನ್ನು ಉಭಯ ದೇಶಗಳು ಅಧಿಕೃತವಾಗಿ ಅಂತಿಮಗೊಳಿಸುವ ನಿರೀಕ್ಷೆಯಿದೆ. ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಭಾರತಕ್ಕೆ ಸಕಾಲದಲ್ಲಿ ತಲುಪಿಸುವಂತೆ ಖಚಿತಪಡಿಸಿಕೊಳ್ಳಲು ಸಿಂಗ್ ರಷ್ಯಾಗೆ ಮನವಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details