ಲಖನೌ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗುರುವಾರ ಉತ್ತರ ಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿದೆ.
ಉತ್ತರ ಪ್ರದೇಶದಲ್ಲಿಂದು ಸೆಕ್ಷನ್ 144 ಜಾರಿ: ಸಮಾರಂಭಗಳಲ್ಲಿ ಪಾಲ್ಗೊಳ್ಳದಂತೆ ಜನರಿಗೆ ಡಿಜಿಪಿ ಸೂಚನೆ - ಉತ್ತರ ಪ್ರದೇಶ ಡಿಜಿಪಿ ಒ.ಪಿ ಸಿಂಗ್ ಲೇಟೆಸ್ಟ್ ಟ್ವೀಟ್
ಉತ್ತರ ಪ್ರದೇಶದಲ್ಲಿ ಇಂದು ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಲ್ಲಿ ಹಾಗೂ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವಂತೆ ಪೋಷಕರಲ್ಲಿ ಡಿಜಿಪಿ ಒ.ಪಿ ಸಿಂಗ್ ಮನವಿ ಮಾಡಿದ್ದಾರೆ.
ಡಿಜಿಪಿ ಒ.ಪಿ ಸಿಂಗ್
ಉತ್ತರ ಪ್ರದೇಶದಲ್ಲಿ ಇಂದು ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಲ್ಲಿ ಹಾಗೂ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವಂತೆ ಪೋಷಕರಲ್ಲಿ ಡಿಜಿಪಿ ಒ.ಪಿ ಸಿಂಗ್ ಮನವಿ ಮಾಡಿದ್ದಾರೆ.
ಸಮಾಜವಾದಿ ಪಕ್ಷ ಹಾಗೂ ಕೆಲ ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಆದರೆ ಸೆಕ್ಷನ್ 144 ಪ್ರದೇಶಗಳಲ್ಲಿ ಯಾವುದೇ ಪ್ರತಿಭಟನೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.