ತಿರುವನಂತಪುರ:ಕೊರೊನಾ ಪ್ರಕರಣ ಏರಿಕೆ ತಡೆಗಟ್ಟಲು ಕೇರಳ ಸರ್ಕಾರ 10 ಜಿಲ್ಲೆಗಳಲ್ಲಿ ಸಿಆರ್ಪಿಸಿಯ ಸೆ.144 ಜಾರಿಗೊಳಿಸಿದ್ದು, ಐದಕ್ಕೂ ಹೆಚ್ಚು ಜನ ಒಂದೆಡೆ ಸೇರದಂತೆ ನಿರ್ಬಂಧ ವಿಧಿಸಿದೆ.
ಜನರು ಗುಂಪು ಸೇರುವುದರಿಂದ ಕೋವಿಡ್ ಹರಡುವಿಕೆ ಅಪಾಯ ಹೆಚ್ಚಾಗಿರುತ್ತದೆ ಈ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದಲೇ ಸೆ.144 ಜಾರಿಗೆ ಬರಲಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಲಾಗಿದೆ. ತಿರುವನಂತಪುರಂ, ಕೊಟ್ಟಾಯಂ, ಎರ್ನಾಕುಲಂ, ಕೋಝಿಕೋಡ್, ಮಲಪ್ಪುರಂ, ಅಲಪ್ಪುಜ, ಇಡುಕ್ಕಿ, ಪಾಲಕ್ಕಾಡ್, ತ್ರಿಶೂರ್, ಕೊಲ್ಲಂ ಜಿಲ್ಲೆಗಳಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಳು ಉಲ್ಭಣಗೊಂಡ ಹಿನ್ನೆಲೆ ಅಕ್ಟೋಬರ್ 31 ರವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸಲು ಅನುಮತಿ ಇಲ್ಲ ಹಾಗೂ ಕಂಟೈನ್ಮೆಂಟ್ ಝೋನ್ ಒಳಗೆ ಮತ್ತು ಹೊರಗೆ ಯಾವುದೇ ಸಭೆ ನಡೆಸಲು ಅನುಮತಿ ನೀಡಲಾಗುವುದಿಲ್ಲ. ಇನ್ನು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 20 ಜನರಿಗೆ ಅವಕಾಶ ನೀಡಿದರೆ, ಮದುವೆಗೆ 50 ಜನರ ಪಾಲ್ಗೊಳ್ಳುವಿಕೆಗೆ ಅವಕಾಶವಿರುತ್ತದೆ.
ಸರ್ಕಾರಿ, ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಗಳಲ್ಲಿ ಗರಿಷ್ಠ 20 ಜನರು ಭಾಗವಹಿಸಬಹುದು. ಆದರೆ, ಸಾರ್ವಜನಿಕ ಸಾರಿಗೆಗೆ ಯಾವುದೇ ತೊಂದರೆಯಾಗುವುದಿಲ್ಲ. ಅಂಗಡಿಗಳು, ಬ್ಯಾಂಕುಗಳು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸೆ.144 ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. ಸಾರ್ವಜನಿಕ ಸಾರಿಗೆ, ಸರ್ಕಾರಿ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಆಸ್ಪತ್ರೆಗಳು ಸಾಮಾಜಿಕ ಅಂತರ ಕಾಪಾಡುವ ಮೂಲಕ ಕಾರ್ಯನಿರ್ವಹಿಸಬಹುದು ಎಂದು ತಿಳಿಸಲಾಗಿದೆ.