ಔರಂಗಾಬಾದ್ (ಬಿಹಾರ): ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ನಾಲ್ವರು 4 ನಕ್ಸಲರನ್ನು ಹೊಡೆದುರುಳಿಸಿವೆ.
ಔರಂಗಾಬಾದ್: ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು - ಬಿಹಾರ, ಔರಂಗಾಬಾದ್,ಭದ್ರತಾ ಪಡೆಗಳ ಕಾರ್ಯಾಚರಣೆ, ಗುಂಡಿನ ಚಕಮಕಿ, ಕೋಬ್ರಾ, ಎಸ್‌ಟಿಪಿ ಮತ್ತು ಸಿಆರ್‌ಪಿಎಫ್ ಪಡೆಗಳು , ನಕ್ಸಲರ ಹತ್ಯೆ, ಕನ್ನಡ ವಾರ್ತೆ, ಈಟಿವಿ ಭಾರತ
ಬಿಹಾರದ ಔರಂಗಾಬಾದ್ ನಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.
![ಔರಂಗಾಬಾದ್: ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು](https://etvbharatimages.akamaized.net/etvbharat/prod-images/768-512-3942644-thumbnail-3x2-hrs.jpg)
ನಾಲ್ಕು ಜನ ನಕ್ಸಲ್ ರನ್ನು ಹೊಡದುರುಳಿಸಿದ ಭದ್ರತಾ ಪಡೆಗಳು
ಕೋಬ್ರಾ, ಎಸ್‌ಟಿಪಿ ಮತ್ತು ಸಿಆರ್‌ಪಿಎಫ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೇವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಸುಮಾರು 500 ಸುತ್ತಿನ ಗುಂಡಿನ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಹೆಚ್ಚುವರಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.