ಕರ್ನಾಟಕ

karnataka

ETV Bharat / bharat

ಶಿವಸೇನೆ+ಎನ್​ಸಿಪಿ+ಕಾಂಗ್ರೆಸ್​​ ಸರ್ಕಾರದಿಂದ 5 ವರ್ಷ ಆಡಳಿತಾವಧಿ ಪೂರ್ಣ: ಶರದ್​ ಪವಾರ್​ - ಎನ್​ಸಿಪಿ ಮುಖಂಡ ಶರದ್​ ಪವಾರ್​​

ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ನಾಳೆ ಕೊನೆಗೊಳ್ಳುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿದ್ದು ಎನ್​ಸಿಪಿ ಮುಖಂಡ ಶರದ್​ ಪವಾರ್​ ಈ ಬಗ್ಗೆ ಮಾತನಾಡಿದ್ದಾರೆ.

ಎನ್​​ಸಿಪಿ ಮುಖಂಡ ಶರದ್​ ಪವಾರ್​

By

Published : Nov 15, 2019, 3:33 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಶಿವಸೇನೆ, ಎನ್​​ಸಿಪಿ ಹಾಗೂ ಕಾಂಗ್ರೆಸ್​ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.

ಎನ್​​ಸಿಪಿ ಮುಖ್ಯಸ್ಥ ಶರದ್​ ಪವಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ​​, ರಾಜ್ಯದಲ್ಲಿ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಿದ್ದು, ಐದು ವರ್ಷಗಳ ಆಡಳಿತ ನೀಡಲಿದ್ದೇವೆ ಎಂದು ತಿಳಿಸಿದ್ರು.

ಸರ್ಕಾರ ರಚನೆ ಬಗ್ಗೆ ನಮ್ಮ ನಡುವೆ ಮಾತುಕತೆ ನಡೆಯುತ್ತಿದ್ದು ಇಂದು ಅಥವಾ ನಾಳೆ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರಾಜ್ಯದಲ್ಲಿ ಕೇಂದ್ರ ಸರ್ಕಾರ ಹೇರಿರುವ ರಾಷ್ಟ್ರಪತಿ ಆಡಳಿತ ಬಹಳಷ್ಟು ದಿನ ಮುಂದುವರಿಯಲ್ಲ. ಜತೆಗೆ ಯಾವುದೇ ಮಧ್ಯಂತರ ಚುನಾವಣೆಯೂ ನಡೆಯುವುದಿಲ್ಲ ಎಂದು ಅವರು ಹೇಳಿದ್ರು.

ಸ್ಥಿರ ಸರ್ಕಾರ ರಚನೆ ನಮ್ಮ ಆದ್ಯತೆಯಾಗಿದ್ದು, ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಕೆಲಸ ಮಾಡಲಿದ್ದೇವೆ ಎಂದರು. ಇದೇ ವೇಳೆ, ಶಿವಸೇನೆ ಬೇಡಿಕೆ ಇಟ್ಟಿರುವ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇಲ್ಲಿಯವರೆಗೆ ಯಾವುದೇ ರೀತಿಯ ನಿರ್ಧಾರ ತೆಗೆದುಕೊಂಡಿಲ್ಲ ಎಂದರು.

ಇದೇ ವಿಷಯವಾಗಿ ಮಾತನಾಡಿರುವ ಶಿವಸೇನೆ ಮುಖಂಡ ಸಂಜಯ್​ ರಾವತ್​, ಮುಂದಿನ 25 ವರ್ಷಗಳ ಕಾಲ ಶಿವಸೇನೆ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಲಿದ್ದು, ಅದಕ್ಕೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.

ABOUT THE AUTHOR

...view details