ವೇದಾದ್ರಿ(ಆಂಧ್ರಪ್ರದೇಶ):ಟ್ರ್ಯಾಕ್ಟರ್-ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದ ವೇದಾದ್ರಿಯಲ್ಲಿ ನಡೆದಿದೆ.
ಟ್ರ್ಯಾಕ್ಟರ್-ಲಾರಿ ನಡುವೆ ಮುಖಾಮುಖಿ ಅಪಘಾತ: ಸ್ಥಳದಲ್ಲೇ 9 ಮಂದಿ ದುರ್ಮರಣ - ಟ್ರ್ಯಾಕ್ಟರ್-ಲಾರಿ ನಡುವೆ ಮುಖಾಮುಖಿ
ಭೀಕರ ರಸ್ತೆ ಅಪಘಾತವೊಂದರಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಕೃಷ್ಣ ಜಿಲ್ಲೆಯ ವೇದಾದ್ರಿ ಬಳಿ ನಡೆದಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
Andhra Pradesh
ವೇದಾದ್ರಿ ಗ್ರಾಮದಲ್ಲಿ ವಾಸವಾಗಿದ್ದ 20 ಜನರು ಟ್ರ್ಯಾಕ್ಟರ್ನಲ್ಲಿ ತಮ್ಮ ಊರಿನತ್ತ ತೆರಳುತ್ತಿದ್ದರು. ಘಟನೆಯಲ್ಲಿ ಸಾವನ್ನಪ್ಪಿದವರು ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.