ಕನೌಜ್ (ಉತ್ತರ ಪ್ರದೇಶ):ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅದರ ತೀರ್ವತೆಗೆ ಎರಡೂ ವಾಹನಗಳು ಹೊತ್ತಿ ಉರಿದಿವೆ. ಸುಮಾರು 43 ಜನರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡ 21 ಮಂದಿಯನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕನ್ನೌಜ್ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ತಿಳಿಸಿದ್ದಾರೆ.
ಬೆಂಕಿ ಈಗ ನಿಯಂತ್ರಣಕ್ಕೆ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ 25 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಲ್ಲಿ 13 ಜನರನ್ನು ವೈದ್ಯಕೀಯ ಕಾಲೇಜು ತಿರ್ವಾಗೆ ಕಳುಹಿಸಲಾಗಿದೆ. ಚಿಬ್ರಾಮೌದ ಬಿಜೆಪಿ ಶಾಸಕ ಅರ್ಚನಾ ಪಾಂಡೆ ಅವರು ಆಸ್ಪತ್ರೆಗೆ ಭೇಟಿ ಮಾಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಎಲ್ಲಾ ರೀತಿಯ ಸಹಾಯ ನೀಡುವಂತೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ಪರಿಹಾರವಾಗಿ ತಲಾ 50,000 ರೂ.ಘೋಷಣೆ ಮಾಡಲಾಗಿದೆ. ಸತ್ತರ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
ಇನ್ನೊಂದಡೆ ಈ ಬಗ್ಗೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಮೃತ ಕುಟುಂಬಕ್ಕೆ ಟ್ವಿಟ್ಟರ್ ಮೂಲಕ ಸಾಂತ್ವನ ಹೇಳಿದ್ದಾರೆ.