ನವದೆಹಲಿ: ಕರ್ನಾಟಕದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಕೇಂದ್ರ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ, ಕರ್ನಾಟಕದ ಸಂಸದ ಡಾ. ಉಮೇಶ್ ಜಾಧವ್ ಅವರು ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದರು.
ಅರ್ಜುನ್ ಮುಂಡಾ ಭೇಟಿಯಾದ ನಾಯಕರು: ಕೋಲಿ ಸಮಾಜ ಎಸ್ಟಿಗೆ ಸೇರಿಸಲು ಮನವಿ - union ministers arjun munda
ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯೊಂದಿಗೆ ಕರ್ನಾಟಕದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಕೇಂದ್ರ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ, ಸಂಸದ ಡಾ. ಉಮೇಶ್ ಜಾಧವ್ ಅವರು ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದರು.
ಅರ್ಜುನ್ ಮುಂಡಾ ಭೇಟಿಯಾದ ನಾಯಕರು
ಶಾಸ್ತ್ರಿ ಭವನದಲ್ಲಿನ ಸಚಿವಾಲಯಕ್ಕೆ ಹೋಗಿ ಕೋಲಿ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಅರ್ಜುನ್ ಮುಂಡಾ ಅವರನ್ನು ಒತ್ತಾಯಿಸಿದ್ದಾರೆ.
ಅಲ್ಲದೇ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯ ಬಗ್ಗೆ ಅರ್ಜುನ್ ಮುಂಡಾ ಅವರೊಂದಿಗೆ ಮಾತುಕತೆ ನಡೆಸಿದರು. ಅರ್ಜುನ್ ಮುಂಡಾ ಈ ಬಾರಿ ಜಾರ್ಖಂಡ್‌ನ ಖೂಂಟಿನಿಂದ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಅವರನ್ನು ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವರನ್ನಾಗಿ ಮಾಡಲಾಗಿದೆ.