ನವದೆಹಲಿ: ಕೋವಿಡ್ ನಂತರದ ಆರೈಕೆಗಾಗಿ ಆಗಸ್ಟ್ 18ರಂದು ಏಮ್ಸ್ಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಏಮ್ಸ್ನಿಂದ ಡಿಸ್ಚಾರ್ಜ್ - ಗೃಹ ಸಚಿವ ಅಮಿತ್ ಶಾ ಕೊರೊನಾ ಸುದ್ದಿ
ಆಗಸ್ಟ್ 18ರಂದು ಏಮ್ಸ್ಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏಮ್ಸ್ ಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಆಯಾಸ ಮತ್ತು ಮೈ-ಕೈ ನೋವಿನಿಂದ ಶಾ ಅವರನ್ನು ಏಮ್ಸ್ಗೆ ದಾಖಲಿಸಲಾಗಿತ್ತು. ಗೃಹ ಸಚಿವ ಅಮಿತ್ ಶಾ ಕಳೆದ 3-4 ದಿನಗಳಿಂದ ಆಯಾಸ ಮತ್ತು ಮೈ-ಕೈ ನೋವಿನಿಂದ ಬಳಲುತ್ತಿದ್ದರು. ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅವರು COVID ನಂತರದ ಆರೈಕೆಗಾಗಿ ಏಮ್ಸ್ಗೆ ದಾಖಲಾಗಿದ್ದರು. ಆಸ್ಪತ್ರೆಯಿಂದಲೇ ತಮ್ಮ ಕೆಲಸ ಮುಂದುವರೆಸಿದ್ದರು. ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.