ಕರ್ನಾಟಕ

karnataka

ETV Bharat / bharat

ಆಸ್ಪತ್ರೆಯಿಂದ ಜೈಲಿಗೆಹೋದ ಚಿನ್ಮಯಾನಂದ ಸ್ವಾಮಿ...ಕಾನೂನು ವಿದ್ಯಾರ್ಥಿನಿಗೆ 14 ದಿನ ನ್ಯಾಯಾಂಗ ಬಂಧನ

ಚಿನ್ಮಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾನೂನು ವಿದ್ಯಾರ್ಥಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಆಸ್ಪತ್ರೆಯಿಂದ ಜೈಲಿಗೆಹೋದ ಚಿನ್ಮಯಾನಂದ ಸ್ವಾಮಿ...ಕಾನೂನು ವಿದ್ಯಾರ್ಥಿನಿಗೆ 14 ದಿನ ನ್ಯಾಯಾಂಗ ಬಂಧನ

By

Published : Sep 30, 2019, 9:58 PM IST

Updated : Sep 30, 2019, 11:46 PM IST

ಶಹಜಹಾನ್ಪುರ್(ಉತ್ತರ ಪ್ರದೇಶ):ಅತ್ಯಾಚಾರ ಪ್ರಕರಣ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿ ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಹೋಗಿದ್ದಾರೆ.

ಚಿನ್ಮಯಾನಂದ ಅವರು ಬಂಧನದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿ ಲಕ್ನೋದ ಸಂಜಯ್​ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮತ್ತೆ ಜೈಲಿಗೆ ಕಳುಹಿಸಲಾಯಿತು.

ಚಿನ್ಮಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆಯಿಟ್ಟು ಬಂಧನಕ್ಕೆ ಒಳಗಾಗಿರುವ ಕಾನೂನು ವಿದ್ಯಾರ್ಥಿಯನ್ನ 14ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಚಿನ್ಮಯಾನಂದ ಸಲ್ಲಿಸಿದ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತರು ₹ 5 ಕೋಟಿಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ವಿಡಿಯೋ ಬಿಡುಗಡೆಗೊಳಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಚಿನ್ಮಯಾನಂದ ಸ್ವಾಮಿ​ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಎಸ್​ಐಟಿ ತಂಡ ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಮೂರು ಜನ ಸ್ನೇಹಿತರನ್ನ ಬಂಧಿಸಿದ್ದರು.

Last Updated : Sep 30, 2019, 11:46 PM IST

ABOUT THE AUTHOR

...view details