ನವದೆಹಲಿ:ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಶಾಹೀನ್ ಬಾಗ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಇತರರು ನಡೆಸಿದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶಶಿ ತರೂರ್ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಅವರೊಂದಿಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸುಭಾಷ್ ಚೋಪ್ರಾ ಮತ್ತು ಮಾಜಿ ಸೀಲಾಂಪುರ ಶಾಸಕ ಮಾತೀನ್ ಅಹ್ಮದ್ ಇದ್ದರು.
ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಶಶಿ ತರೂರ್ ಭಾಗಿ - ಕಾಂಗ್ರೆಸ್ ಮುಖಂಡ ಶಶಿ ತರೂರ್
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ನವದೆಹಲಿಯಲ್ಲಿ ಭಾನುವಾರ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸಿಎಎ ವಿರುದ್ದದ ಪ್ರತಿಭಟನೆಯಲ್ಲಿ ಶಶಿ ತರೂರ್ ಭಾಗಿ
ಕಾಂಗ್ರೆಸ್ ಸಂಸದ ಶಶಿ ತರೂರು ಮಾತನಾಡಿ, ಪಕ್ಷವು ವಿದ್ಯಾರ್ಥಿಗಳೊಂದಿಗೆ ನಿಂತಿದೆ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ಬಳಿಕ ಟ್ವೀಟ್ ಮಾಡಿದ ಅವರು, ಶಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಹಿಳೆಯರ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇ ಬೇಕು. ಜೊತೆಗೆ 100ರ ಸಮೀಪದ ವಯಸ್ಸಿನ ದಾದಿಯಂದಿರೂ ಕೂಡ ಸಿಎಎ ವಿರುದ್ಧ ಧ್ವನಿ ಎತ್ತಿದ್ದರು ಎಂದು ಬರೆದುಕೊಂಡಿದ್ದಾರೆ.
Last Updated : Jan 12, 2020, 11:49 PM IST