ಭೋಪಾಲ್ (ಮಧ್ಯಪ್ರದೇಶ):ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೊರೊನಾ ವೈರಸ್ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವೇಳೆ, ಆಸ್ಪತ್ರೆಯಿಂದಲೇ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜನಪ್ರತಿನಿಧಿಗಳ ಜೊತೆ ಮಾತನಾಡಿದರು.
ಸಚಿವರು, ಶಾಸಕರು ಸಂಬಳದ ಶೇ.30ರಷ್ಟನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿ: ಸಿಎಂ ಚೌಹಾಣ್ - ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ವೈರಾಣುವಿನ ವಿರುದ್ಧ ಹೋರಾಡಲು ರಾಜ್ಯದ ಎಲ್ಲ ಸಚಿವರು, ಶಾಸಕರು ಮುಂದಿನ 3 ತಿಂಗಳ ಕಾಲ ತಮ್ಮ ಸಂಬಳದ ಶೇ.30ರಷ್ಟು ಭಾಗವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವಂತೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮನವಿ ಮಾಡಿದ್ದಾರೆ.
Shivraj Singh Chouhan
ಕೋವಿಡ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸುವ ಅವಶ್ಯಕತೆ ಇದೆ. ಹೀಗಾಗಿ ಕೋವಿಡ್ ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳಲು ನೆರವಾಗಲು ಸಚಿವರು ಹಾಗೂ ಶಾಸಕರು ತಮ್ಮ ವೇತನದ ಶೇ.30ರಷ್ಟು ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅದಕ್ಕಾಗಿ ನಾವೆಲ್ಲರೂ ಈಗಿನಿಂದಲೇ ತಯಾರಿ ನಡೆಸಬೇಕಾಗಿದೆ ಎಂದರು.