ಮುಂಬೈ: ಮಹಾರಾಷ್ಟ್ರದ ಪುಣೆಯ ಉಲ್ಲಾಸ್ ನಗರದಲ್ಲಿರುವ ಶಾಲೆಯೊಂದರಲ್ಲಿ ಪಾಠ ನಡೆಯುವಾಗಲೇ ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ.
ಶಾಕಿಂಗ್ ವಿಡಿಯೋ: ಪಾಠ ಮಾಡುವಾಗಲೇ ಕುಸಿಯಿತು ಛಾವಣಿ, 3 ಮಕ್ಕಳಿಗೆ ಗಾಯ - kannadanews
ಪಾಠ ಮಾಡುವಾಗಲೇ ಶಾಲಾ ಕೊಠಡಿಯ ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ
ಛಾವಣಿ ಕುಸಿದಿರುವ ವಿಡಿಯೊ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತಿದೆ. ಉಲ್ಲಾಸ್ ನಗರದ ಜುಲೆಲಾ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ.
Last Updated : Jun 19, 2019, 7:31 PM IST