ಪಾಟ್ನಾ :ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಕೇಂದ್ರ ಸಚಿವ ದಿ. ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿ ಸೇರುವ ಸಾಧ್ಯತೆ ಇದೆ.
ವರದಿಗಳ ಪ್ರಕಾರ, ಶ್ರೇಯಸಿ ಸಿಂಗ್ ಅವರನ್ನು ಬಂಕಾ ಜಿಲ್ಲೆಯ ಅಮರ್ಪುರ್ ಅಥವಾ ಜಮುಯಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಮತ್ತು ರಾಜ್ಯಸಭಾ ಸಂಸದ, ಬಿಹಾರ ಬಿಜೆಪಿ ಉಸ್ತುವಾರಿ ಭೂಪೇಂದರ್ ಯಾದವ್ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಂಕಾ ಜಿಲ್ಲೆಯಿಂದ ಲೋಕಭೆಗೆ ಸ್ಪರ್ಧಿಸಿದ್ದ ಶ್ರೇಯಸಿ ಸಿಂಗ್ ಅವರ ತಾಯಿ ಪುತುಲ್ ಕುಮಾರಿ ಚುನಾವಣೆಯಲ್ಲಿ ಜಯ ಗಳಿಸಿದ್ದರು ಮತ್ತು 2019ರವರೆಗೆ ಸಂಸದರಾಗಿ ಬಂಕಾ ಕ್ಷೇತ್ರ ಪ್ರತಿನಿಧಿಸಿದ್ದರು.
ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಶೂಟರ್ ಶ್ರೇಯಾ ಸಿಂಗ್, ಡಬಲ್ ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಮತ್ತು ಇದಕ್ಕಾಗಿ ಅರ್ಜುನ ಪ್ರಶಸ್ತಿಯನ್ನು ಪಡೆದಿದ್ದಾರೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 2018ರ ಕಾಮನ್‌ವೆಲ್ತ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ಕಾಟ್ಲೆಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆದ 2014ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಡಬಲ್ ಟ್ರ್ಯಾಪ್ ಮತ್ತು ಬೆಳ್ಳಿ ಪದಕ ಗೆದ್ದಿದ್ದಾರೆ.