ಕರ್ನಾಟಕ

karnataka

ETV Bharat / bharat

ನೀರು ಕೊಡಲು ಆಗಲ್ಲ.. ಮಹಾರಾಷ್ಟ್ರದಲ್ಲೇ ಬಿಎಸ್​ವೈಗೆ ಸಿದ್ದು ತಿರುಗೇಟು! - ಮಹಾರಾಷ್ಟ್ರ ವಿಧಾನಸಭೆ ಚುನಾವಣೆ

ಕರ್ನಾಟಕದಲ್ಲಿ ಉಪ ಚುನಾವಣೆ ನಂತರ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

By

Published : Oct 17, 2019, 7:43 PM IST

ಸಾಂಗ್ಲಿ(ಮಹಾರಾಷ್ಟ್ರ): ಕರ್ನಾಟಕದಿಂದ ಮಹಾರಾಷ್ಟ್ರದ ಬರ ಪ್ರದೇಶಗಳಿಗೆ ಕರ್ನಾಟಕದಿಂದ ನೀರು ಒದಗಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಸಾಂಗ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರದ ಬರ ಪ್ರದೇಶಗಳಿಗೆ ಕರ್ನಾಟಕದಿಂದ ನೀರು ಒದಗಿಸುತ್ತೇನೆ ಎಂದಿದ್ದಾರೆ. ಇದು ಸಾಧ್ಯವಿಲ್ಲ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿ ಭಾವನಾತ್ಮಕ ವಿಷಯಗಳ ಬಗ್ಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಪ್ರಬಲವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್​ಗೆ ಜನ ಹೆಚ್ಚು ಮತ ಹಾಕಿದ್ದಾರೆ. ಆದರೆ, ಸೀಟುಗಳು ಕಡಿಮೆ ಬಂದಿವೆ ಅಷ್ಟೆ ಎಂದಿದ್ದಾರೆ.

ಕರ್ನಾಟಕದಲ್ಲಿ 15 ಶಾಸಕರನ್ನ ಅನರ್ಹಗೊಳಿಸಲಾಗಿದೆ. ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆಯಲ್ಲಿ ಆದಷ್ಟು ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದಿದ್ದಾರೆ. ಉಪ ಚುನಾವಣೆ ನಂತರ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಾ? ಎಂಬ ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಇಲ್ಲ, ಮುಂದೆ ಮಧ್ಯಂತರ ಚುನಾವಣೆ ಎದುರಾಗುತ್ತದೆ ಎಂದಿದ್ದಾರೆ.

ABOUT THE AUTHOR

...view details