ಪುಣೆ:ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಟ ಮುಂದುವರೆದಿದ್ದು, ಈಗಾಗಲೇ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ .ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ.
ಗುಡ್ ನ್ಯೂಸ್: ಜೂನ್ ವೇಳೆಗೆ ಭಾರತದಲ್ಲಿ ಮತ್ತೊಂದು ದೇಶಿ ಕೋವಿಡ್ ಲಸಿಕೆ? - ಜೂನ್ ತಿಂಗಳಲ್ಲಿ ಕೋವಿಡ್ ಲಸಿಕೆ
ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಜುಲೈ ವೇಳೆಗೆ ಮತ್ತೊಂದು ಕೋವಿಡ್ ಲಸಿಕೆ ಅಭಿವೃದ್ಧಿಗೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಇಒ ಮಹತ್ವದ ಮಾಹಿತಿ ನೀಡಿದ್ದಾರೆ.
ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೊಸ ಕೊರೊನಾ ಲಸಿಕೆ ರಿಲೀಸ್ ಮಾಡಲು ಮುಂದಾಗಿದ್ದು, ಜೂನ್ ತಿಂಗಳ ವೇಳಗೆ ಇದು ಮಾರುಕಟ್ಟೆಗೆ ಲಗ್ಗೆ ಹಾಕುವ ಸಾಧ್ಯತೆ ದಟ್ಟವಾಗಿದೆ.
ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸಿರುವ ಕೊವ್ಯಾಕ್ಸಿನ್ ಈಗಾಗಲೇ ಭಾರತ ಮಾತ್ರವಲ್ಲದೇ, ವಿದೇಶದಲ್ಲೂ ಬಳಸಲ್ಪಡುತ್ತಿದ್ದು, ಇದೀಗ ನೊವಾವಾಕ್ಸ್ ಜತೆ ಸೇರಿ ಈ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸೆರಂ ಇನ್ಸ್ಟಿಟ್ಯೂಟ್ ಸಿಇಒ ಆದರ್ ಪೂನವಾಲ್ಲಾ ಮಾತನಾಡಿದ್ದು, ಈಗಾಗಲೇ ಪ್ರಯೋಗ ಶುರು ಮಾಡಲಾಗಿದ್ದು, 2021ರ ಜುಲೈ ವೇಳೆಗೆ ಈ ಲಸಿಕೆ ಅಭಿವೃದ್ಧಿಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊವ್ಯಾಕ್ಸಿನ್ ಹೆಸರಿನಲ್ಲೇ ಈ ಲಸಿಕೆ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದರೆ ಇದರ ಪ್ರಯೋಗಕ್ಕಾಗಿ ಡಿಸಿಜೆಐನಿಂದ ಅನುಮತಿ ಪಡೆದುಕೊಳ್ಳಬೇಕಾಗಿದೆ.