ನವದೆಹಲಿ:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಶನಿವಾರ ಮಧ್ಯರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದರು.
79 ವರ್ಷದ ಜೈಪಾಲ್ ರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮಧ್ಯರಾತ್ರಿ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ.

1942 ಜನವರಿ 16ರಂದು ತೆಲಂಗಾಣದ ನಲಗೊಂಡ ಜಿಲ್ಲೆಯ ನೆರ್ಮತ್ತಾ ಗ್ರಾಮದಲ್ಲಿ ಜನಿಸಿದಜೈಪಾಲ್ ರೆಡ್ಡಿ, ಕೇಂದ್ರದ ವಿಜ್ಞಾನ ಹಾಗೂ ತಂತ್ರಜ್ಞಾನ , ಭೂ ವಿಜ್ಞಾನ, ಮಾಹಿತಿ ಮತ್ತು ಪ್ರಸಾರ, ನಗರಾಭಿವೃದ್ಧಿ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ರಾಜ್ಯಸಭಾ ಸದಸ್ಯರೂ ಆಗಿದ್ದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ನಿಂದ ಹೊರಬಂದಿದ್ದ ಅವರು, 1980ರ ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ವಿರುದ್ಧ ಕಣಕ್ಕಿಳಿದಿದ್ದರು. ಆನಂತರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.