ಕರ್ನಾಟಕ

karnataka

ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು, ಓರ್ವ ಬಾಲಕಿ ಸಾವು... 20 ಮಂದಿಗೆ ಗಾಯ

By

Published : Mar 16, 2020, 7:01 PM IST

ತೆಲಂಗಾಣದ ಸಂಗಾರೆಡ್ಡಿ ಪ್ರಾಂತ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ.

Six dead, 20 injured,ರಸ್ತೆ ಅಪಘಾತದಲ್ಲಿ 6 ಜನ ಸಾವು
ರಸ್ತೆ ಅಪಘಾತದಲ್ಲಿ 6 ಜನ ಸಾವು

ಸಂಗಾರೆಡ್ಡಿ(ತೆಲಂಗಾಣ) : ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ವ್ಯಾನ್ ಮತ್ತು ರಾಜ್ಯ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ.

ಅಪಘಾತದಲ್ಲಿ ಐವರು ಮಹಿಳೆಯರು ಮತ್ತು 10 ವರ್ಷದ ಬಾಲಕಿ ಸೇರಿ 6 ಜನ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಸಂಗಾರೆಡ್ಡಿ ಪ್ರಾಂತ್ಯದ ಪಸಲ್​ವಾದಿ ಗ್ರಾಮದವರು ಎಂದು ತಿಳಿದು ಬಂದಿದ್ದು, ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ABOUT THE AUTHOR

...view details