ಕರ್ನಾಟಕ

karnataka

ETV Bharat / bharat

ಬಹ್ರೇಚ್‌ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, ಹಲವರಿಗೆ ಗಾಯ - Uttar Pradesh Road Accident News

ಕಿಚೌಚಾ ಷರೀಫರ ದರ್ಶನ ಪಡೆದು ಹಿಂದಿರುಗುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬಹ್ರೇಚ್​ನಲ್ಲಿ ಈ ದುರ್ಘಟನೆ ಸಂಭವಿಸಿದೆ.

six-people-died-and-many-injured-in-road-accident-in-bahraich
ಬಹ್ರೇಚ್‌ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, ಹಲವರಿಗೆ ಗಾಯ

By

Published : Nov 2, 2020, 7:41 AM IST

Updated : Nov 2, 2020, 7:48 AM IST

ಬಹ್ರೇಚ್(ಉತ್ತರ ಪ್ರದೇಶ):ಜಿಲ್ಲೆಯ ಪ್ರಯಾಗ್‌ಪುರದ ಶಿವದಾಹ ಮೋದ್​​ ಎಂಬಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟರೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಹ್ರೇಚ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮಾಹಿತಿಯ ಪ್ರಕಾರ, ಭಕ್ತರಿಂದ ತುಂಬಿದ ಟಾಟಾ ಮ್ಯಾಜಿಕ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ.

ಕಿಛೌಚಾ ಷರೀಫ್ ರ ದರ್ಶನ ಮಾಡಿ ಹಿಂದಿರುಗುತ್ತಿದ್ದರು:

ಕಿಚೌಚಾ ಷರೀಫ್ ಅವರ ದರ್ಶನ ಪಡೆಯಲು ನೆರೆಯ ಜಿಲ್ಲೆಯ ಲಖಿಂಪುರ ಖೇರಿಯಿಂದ ಸುಮಾರು 16 ಜನರು ಹೋಗಿದ್ದರು. ಅಲ್ಲಿಂದ ಹಿಂದಿರುಗುವಾಗ ಇಂದು ನಸುಕಿನಜಾವ 1:30 ರಿಂದ 2 ರ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯ ವೇಳೆ ಸಾವನ್ನಪ್ಪಿದ್ದಾರೆ ಎಂದು ತುರ್ತು ಚಿಕಿತ್ಸಾ ವಿಭಾಗದ ವೈದ್ಯ ಡಾ. ವಿವೇಕ್ ಗುಪ್ತಾ ಮಾಹಿತಿ ನೀಡಿದ್ದಾರೆ. .

Last Updated : Nov 2, 2020, 7:48 AM IST

ABOUT THE AUTHOR

...view details