ಗಾಜಿಯಾಬಾದ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಓರ್ವ ಮಹಿಳೆ ಹಾಗೂ ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್: 5 ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು - short circuit in UP
ಉತ್ತರ ಪ್ರದೇಶದ ಗಾಜಿಯಾಬಾದ್ನ ಲೋನಿಯಲ್ಲಿರುವ ಮನೆಯೊಂದರಲ್ಲಿ ವಿದ್ಯುತ್ ಅವಘಡ ಸಂಭವಿಸಿ ಓರ್ವ ಮಹಿಳೆ ಹಾಗೂ ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.
ಗಾಜಿಯಾಬಾದ್ನ ಲೋನಿಯಲ್ಲಿರುವ ಮೌಲಾನಾ ಆಜಾದ್ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ರೆಫ್ರಿಜರೇಟರ್ ಸುಟ್ಟು ಬೂದಿಯಾಗಿದ್ದು, ವಿದ್ಯುತ್ ಶಾಕ್ ತಗುಲಿ ಮನೆಯಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಿಯಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಮೃತರನ್ನು ಪರ್ವೀನ್ (40), ಫಾತಿಮಾ (12), ಸಾಹಿಮಾ (10), ರತಿಯಾ (8) , ಅಬ್ದುಲ್ ಅಜೀಮ್ (8) ಹಾಗೂ ಅಬ್ದುಲ್ ಅಹದ್ (5) ಎಂದು ಗುರುತಿಸಲಾಗಿದೆ. ಇನ್ನು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.