ಡೆಹ್ರಾಡೂನ್ (ಉತ್ತರಾಖಂಡ): ಕೇದಾರನಾಥ ಮೇಘ ಸ್ಫೋಟ ಸಂಭವಿಸಿ 7 ವರ್ಷಗಳೇ ಕಳೆದಿದೆ. ಅದರೆ, ಇದೀಗ ಆ ದುರಂತದಲ್ಲಿ ಸಾವನ್ನಪ್ಪಿದ ನಾಲ್ವರ ಅಸ್ಥಿಪಂಜರದ ಅವಶೇಷಗಳನ್ನು ರಾಂಬಾರದಿಂದ ಹಿಮಾಲಯನ್ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಪತ್ತೆಯಾಗಿದೆ.
ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅವಶೇಷಗಳು ಪತ್ತೆಯಾಗಿವೆ ಎಂದು ರುದ್ರಪ್ರಯಾಗ್ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಸಿಂಗ್ ಭುಲ್ಲರ್ ತಿಳಿಸಿದ್ದಾರೆ. ಇನ್ನು ಅವಶೇಷಗಳನ್ನು ಡಿಎನ್‌ಎ ಮಾದರಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ನೀಡಲಾಗಿದೆ. ಈ ವೇಳೆ ದುರಂತದಲ್ಲಿ ನಾಪತ್ತೆಯಾದವರ ಕುಟುಂಬದ ಸದಸ್ಯರ ಡಿಎನ್‌ಎ ಮಾದರಿಗಳನ್ನು ಹೋಲಿಕೆ ಮಾಡಿ ಅವಶೇಷಗಳ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯಲಿದೆ.