ನವದೆಹಲಿ: ತುಘಲಕಾಬಾದ್ನ ಹರ್ಕೇಶ್ ನಗರ ಮೆಟ್ರೋ ನಿಲ್ದಾಣದ ಬಳಿಯ ಕೊಳಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ದೆಹಲಿಯ ಹರ್ಕೇಶ್ ನಗರದ ಮೆಟ್ರೋ ನಿಲ್ದಾಣದ ಬಳಿ ನಿರ್ಮಿಸಲಾದ ಕೊಳಗೇರಿಗಳಲ್ಲಿನ ಬಟ್ಟೆ ಚಿಂದಿ ಗೋದಾಮಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಅನೇಕ ಕೊಳಗೇರಿಯಲ್ಲಿನ ಗುಡಿಸಲುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.