ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಮುಂದಾಗಿರುವ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಮುಂದಾಗಿರುವ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನಿರ್ಧಾರ ರಾಜಕೀಯ ಪ್ರೇರಿತ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯಾ ಒದಗಿಸುವ ಉದ್ದೇಶ ಅವರಲ್ಲಿ ಇಲ್ಲ ಎಂದಿದ್ದಾರೆ.ಕಾಂಗ್ರೆಸ್ ತಂತ್ರಗಳ ಬಗ್ಗೆ ದೇಶದ ಜನರಿಗೆ ಗೊತ್ತಾಗಿದೆ. ಹೀಗಾಗಿ 2019ರಲ್ಲಿ ಭಾರತೀಯ ಜನತಾ ಪಾರ್ಟಿ ಐತಿಹಾಸಿಕ ಗೆಲುವು ದಾಖಲು ಮಾಡಿದೆ. ಈ ಭೇಟಿ ಕೇವಲ ರಾಜಕೀಯ ಪ್ರೇರಿತ ಎಂಬುದು ಜನರಿಗೆ ಈಗಾಗಲೇ ಗೊತ್ತಾಗಿದೆ ಎಂದಿದ್ದಾರೆ.