ನವದೆಹಲಿ:ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಟ್ವಿಟರ್ನಲ್ಲಿ ತಮ್ಮ ಅಧಿಕೃತ ಖಾತೆಯ ಮೂಲಕ ಸ್ಮೃತಿ ಇರಾನಿ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡಿದ್ದಾರೆ.
ಕೆಲವೊಂದು ವಿಚಾರನ್ನು ಘೋಷಿಸಬೇಕೆಂದರೆ ಪದಗಳನ್ನು ಹುಡುಕಬೇಕಾಗುತ್ತದೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.