ನವದೆಹಲಿ:ಜಾರ್ಖಾಂಡ್‌ನ ಚುನಾವಣಾ ರ್ಯಾಲಿಯಲ್ಲಿ ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿರುವ ವಯನಾಡ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.
ರೇಪ್ ಇನ್ ಇಂಡಿಯಾ ಎಂದ ರಾಹುಲ್ ವಿರುದ್ಧ ಸ್ಮೃತಿ ಇರಾನಿ ದೂರು..
ಜಾರ್ಖಂಡ್ ಚುನಾವಣಾ ರ್ಯಾಲಿಯಲ್ಲಿ ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿರುವ ವಯನಾಡ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.
Smruti irani complaint against rahul gandhi
ಅತ್ಯಾಚಾರವನ್ನೂ ಕೂಡ ರಾಜಕೀಯ ವಿಷಯವಾಗಿ ರಾಹುಲ್ ಗಾಂಧಿ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಲೋಕಸಭೆ ಅಧಿವೇಶನದಲ್ಲೂ ಸಹ ಕೋಲಾಹಲಕ್ಕೆ ಕಾರಣವಾಯಿತು. ಅಲ್ಲದೆ, ಹೇಳಿಕೆಯನ್ನು ಬಿಜೆಪಿ ಖಂಡಿಸಿತು. ಕ್ಷಮೆ ಕೇಳುವಂತೆ ಆಗ್ರಹಿಸಿತು.
ಆದರೆ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ರಾಹುಲ್ ಗಾಂಧಿ, ಈ ಮೊದಲು ಅತ್ಯಾಚಾರ ಕುರಿತು ಪ್ರಧಾನಿ ಮೋದಿ ಅವರು ಹೇಳಿಕೆ ನೀಡಿದ್ದಾರೆ ಎಂದು ಟ್ವಿಟರ್ನಲ್ಲಿ ಮೋದಿ ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.