ನವದೆಹಲಿ : ನಗರದ ಅಮನ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗ್ಯಾಂಗ್ ವಾರ್ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನಿವೃತ್ತ ಎಎಸ್ಐ ಮಗ ಮೃತಪಟ್ಟಿದ್ದಾನೆ.
ಮೃತ ಯುವಕನನ್ನು ನಿತಿನ್ ದಲಾಲ್ ಎಂದು ಗುರುತಿಸಲಾಗಿದೆ. ಈತ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಆತ ಮೃಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗ್ಯಾಂಗ್ ವಾರ್ ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತ ಯುವಕ ದೆಹಲಿ ಪೊಲೀಸ್ ಇಲಾಖೆಯ ನಿವೃತ್ತ ಎಎಸ್ಐ ಮಗ ಎಂದು ತಿಳಿದು ಬಂದಿದೆ.