ಕರ್ನಾಟಕ

karnataka

ETV Bharat / bharat

ಹೊಟ್ಟೆ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗೆ ಮುಂದುವರಿದ ಚಿಕಿತ್ಸೆ: ಆಸ್ಪತ್ರೆಯಿಂದ ಮಾಹಿತಿ - ಸೋನಿಯಾ ಗಾಂಧಿ ಅನಾರೋಗ್ಯ

ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Sonia Gandh suffering from stomach infection,ಹೊಟ್ಟೆ ಸೋಕಿನಿಂದ ಬಳಲುತ್ತಿರುವ ಸೋನಿಯಾ
ಸೋನಿಯಾ ಗಾಂಧಿ

By

Published : Feb 3, 2020, 10:48 PM IST

ನವದೆಹಲಿ:ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ನಿನ್ನೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥ ಡಿ.ಎಸ್.ರಾಣಾ, ನಿನ್ನೆ ಸಂಜೆ 7 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಸೋನಿಯಾ ಗಾಂಧಿ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಿದ್ದಾರೆ. ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿರುವುದು ಕಂಡುಬಂದಿದ್ದು, ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋನಿಯಾ ಗಾಂಧಿ ಭಾನುವಾರ ಆಸ್ಪತ್ರೆಗೆ ದಾಖಲಾಗುವಾಗ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸೋನಿಯಾ ಅವರ ಜೊತೆಯಲ್ಲೆ ಇದ್ದರು. ಕೇಂದ್ರ ಬಜೆಟ್ ಮಂಡನೆ ವೇಳೆ ಕೂಡ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಗೈರಾಗಿದ್ದರು. ಮಂಗಳವಾರ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details