ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿದ್ದಾರೆ.
ತಿಹಾರ್ ಜೈಲಿಗೆ ಭೇಟಿ ನೀಡಿದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್! - ನಮಮೋಹನ್ ಸಿಂಗ್
ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದ್ದಾರೆ.
ಸೋನಿಯಾ ಗಾಂಧಿ, ಮನಮೋಹನ್ ಸಿಂಗ್
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಟ್ಟು ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನ ಭೇಟಿ ಮಾಡಲು ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿದ್ದಾರೆ.
ಜಾಮೀನು ಅರ್ಜಿ ತಿರಸ್ಕರಿಸಿರುವ ಕೋರ್ಟ್ ಅಕ್ಟೋಬರ್ 3ರ ವರೆಗೂ ಚಿದಂಬರಂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಮೂರು ವಾರಗಳಿಂದ ತಿಹಾರ್ ಜೈಲಿನಲ್ಲಿರುವ ಚಿದಂಬಂರಂ ಅವರನ್ನ ಭೇಟಿ ಮಾಡಿರುವ ಸೋನಿಯಾ ಹಾಗೂ ಮನಮೋಹನ್ ಸಿಂಗ್ ಧೈರ್ಯ ತುಂಬಿದ್ದಾರೆ.