ರಾಯಬರೇಲಿ: ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ರಾಯಬರೇಲಿಯಿಂದ ಕಣಕ್ಕಿಳಿಯುವ ಸೋನಿಯಾ ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋಗಿದ್ದು, ವಿಶೇಷ ಹೋಮ-ಹವನ ನಡೆಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ... ಮಕ್ಕಳೊಂದಿಗೆ ಸೋನಿಯಾ ವಿಶೇಷ ಹೋಮ-ಹವನ!
ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಸೋನಿಯಾ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಸೋನಿಯಾ ಗಾಂಧಿ ಪೂಜೆ
ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಠಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು, ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದಕ್ಕೂ ಮುನ್ನ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಗ ರಾಹುಲ್ ಗಾಂಧಿ,ಪುತ್ರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇಂದು ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮೊದಲು ಬಿಜೆಪಿಯ ಸ್ಮೃತಿ ಇರಾನಿ ವಿಶೇಷ ಪೂಜೆ ನಡೆಸಿದ್ದಾರೆ.