ನವದೆಹಲಿ:ಕಾಂಗ್ರೆಸ್ ಆಡಳಿತದ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಜಾರ್ಖಂಡ್ದಲ್ಲಿನ ಜಿಎಸ್‌ಟಿ ಬಾಕಿ, ಜೆಇಇ ಹಾಗೂ ನೀಟ್ ಪರೀಕ್ಷೆಗಳ ಕುರಿತಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವರ್ಚುವಲ್ ಸಭೆ ನಡೆಸಲಿದ್ದಾರೆ.
ಕಾಂಗ್ರೆಸ್ ಆಡಳಿತ ರಾಜ್ಯಗಳ ಸಿಎಂಗಳ ಜೊತೆ ಇಂದು ಸೋನಿಯಾ ಸಭೆ: ಜಿಎಸ್‌ಟಿ ಬಾಕಿ ಬಗ್ಗೆ ಚರ್ಚೆ - ಸೋನಿಯಾ ಗಾಂಧಿ ವರ್ಚುವಲ್ ಸಭೆ
ರಾಜ್ಯಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಾಕಿ, ಜೆಇಇ (ಮೇನ್) ಮತ್ತುನೀಟ್ (ಯುಜಿ) ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ಸಿಎಂಗಳೊಂದಿಗೆ ಸಭೆ ನಡೆಸಲಿದ್ದಾರೆ.
ಕೊರೊನಾ ಹಿನ್ನೆಲೆ ದೇಶಾದ್ಯಂತ ಲಾಕ್ಡೌನ್ ಹೇರಿದ್ದರಿಂದ ಜುಲೈನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಇಳಿಕೆಯಾಗಿತ್ತು. ಒಟ್ಟು 87,422 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 14ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಆಗಸ್ಟ್ 1ರಂದು ತಿಳಿಸಿದೆ. ಅಲ್ಲದೆ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆ ಸೆಪ್ಟೆಂಬರ್ 1ರಿಂದ 6ರವರೆಗೆ ಜೆಇಇ (ಮೇನ್) ಮತ್ತು ಸೆಪ್ಟೆಂಬರ್ 13ರಂದು ನೀಟ್ (ಯುಜಿ) ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಕಟಿಸಿರುವ ಹಿನ್ನೆಲೆ ಈ ಸಭೆ ಪ್ರಮುಖವಾಗಿದೆ.
ಪರೀಕ್ಷೆಗಳನ್ನು ನಡೆಸುವ ಕುರಿತಾದ ಕೇಂದ್ರದ ನಿರ್ಧಾರಕ್ಕೆ ಅನೇಕ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ನೀಟ್ ಮತ್ತು ಜೆಇಇ ಪರೀಕ್ಷೆಗಳ ದಿನಾಂಕದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಕೆ ಪರಿಗಣಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.