ಕರ್ನಾಟಕ

karnataka

ETV Bharat / bharat

ಕೊರೊನಾ ಭೀತಿ; ಕಾಂಗ್ರೆಸ್​ ಸಿಎಂಗಳಿಗೆ ಸೋನಿಯಾ ಪತ್ರ - ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ

ಕೊರೊನಾ ವೈರಸ್​ ಸಂಬಂಧಿಸಿದಂತೆ ಕಾಂಗ್ರೆಸ್​ ಆಡಳಿತ ಇರುವ ರಾಜ್ಯಗಳಲ್ಲಿ ಸಮರ್ಪಕ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಆಡಳಿತವಿರುವ ಸಿಎಂಗಳಿಗೆ ಪತ್ರ ಬರೆದಿದ್ದಾರೆ.

Sonia
ಸೋನಿಯಾ ಗಾಂಧಿ

By

Published : Mar 7, 2020, 10:28 AM IST

ನವದೆಹಲಿ: ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಆಡಳಿತವಿರುವ ಸಿಎಂಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್​ ಸಂಬಂಧಿಸಿದಂತೆ ಕಾಂಗ್ರೆಸ್​ ಆಡಳಿತ ಇರುವ ರಾಜ್ಯಗಳಲ್ಲಿ ಸಮರ್ಪಕ ಕ್ರಮ ಕೈಗೊಳ್ಳಬೇಕು ಹಾಗೂ ಮುಂಜಾಗೃತ ಕ್ರಮ ಕೈಗೊಂಡು ಅರಿವು ಮೂಡಿಸುವ ಪ್ರಯತ್ನ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ವಿಶ್ವದಾದ್ಯಂತ ಕೋವಿಡ್​​-19 ಬಗ್ಗೆ ತುರ್ತು ಪರಿಸ್ಥಿತಿ ಕೈಗೊಳ್ಳಲಾಗಿದೆ. ಹೀಗಾಗಿ ನಮ್ಮ ಆಡಳಿತದ ರಾಜ್ಯಗಳು ಈ ಬಗ್ಗೆ ಜನರಿಗೆ ಅರಿವು ಮೂಡಿಸಿ, ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಸಿಎಂ ಗಳಿಗೆ ಸೋನಿಯಾ ಸಲಹೆ ನೀಡಿದ್ದು, ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ರೋಗ ನಿಯಂತ್ರಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ಚಿಕಿತ್ಸಾ ಘಟಕಗಳನ್ನ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ. ಎಲ್ಲ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗುವಂತೆಯೂ ಹೇಳಿದ್ದಾರೆ.

ABOUT THE AUTHOR

...view details