ಕರ್ನಾಟಕ

karnataka

ETV Bharat / bharat

ನೀಟ್‌ನಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮೋದಿಗೆ ಸೋನಿಯಾ ಪತ್ರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

Sonia Gandhi
ಸೋನಿಯಾ ಗಾಂಧಿ

By

Published : Jul 3, 2020, 6:06 PM IST

ನವದೆಹಲಿ: ಅಖಿಲ ಭಾರತ ಕೋಟಾ ಅಡಿಯಲ್ಲಿ ಇತರ ಹಿಂದುಳಿದ ವರ್ಗದ (ಒಬಿಸಿ) ಅಭ್ಯರ್ಥಿಗಳಿಗೆ ನೀಟ್‌ ಪರೀಕ್ಷೆಯಲ್ಲಿ ಮೀಸಲಾತಿ ನಿರಾಕರಿಸಿರುವ ಕೇಂದ್ರದ ನಿರ್ಧಾರವನ್ನು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸೋನಿಯಾ ಗಾಂಧಿ, ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಕ್ರಮವಾಗಿ ಶೇ.15, ಶೇ.7.5 ಮತ್ತು ಶೇ.10 ರಷ್ಟು ಸೀಟ್​ಗಳನ್ನು ಕಾಯ್ದಿರಿಸಲಾಗಿದೆ. ಆದರೆ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಇಲ್ಲದ ಕಾರಣ 2017 ರಿಂದ ಈವರೆಗೆ 11,000 ಒಬಿಸಿ ಅಭ್ಯರ್ಥಿಗಳು ನೀಟ್​ ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ಸೋನಿಯಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಬೇಕೆಂದು ಕೈ ನಾಯಕಿ ಪಿಎಂ ಮೋದಿಗೆ ಆಗ್ರಹಿಸಿದ್ದಾರೆ.

ABOUT THE AUTHOR

...view details