ಮುಂಬೈ:ಮಹಾಮಾರಿ ಕೊರೊನಾ ವೈರಸ್ ಹಾಗೂ ಲಾಕ್ಡೌನ್ ಸಮಯದಲ್ಲಿ ಸಾವಿರಾರು ಜನರಿಗೆ ಸಹಾಯ ಮಾಡಿ ಎಲ್ಲರಿಂದಲೂ ಮೆಚ್ಚುಗೆಗೆ ಒಳಗಾಗಿರುವ ನಟ ಸೋನು ಸೂದ್ ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಹಾಕಿಕೊಂಡಿದ್ದು, ಈ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.
ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಅನೇಕ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಆನ್ಲೈನ್ ತರಗತಿಗಳಿಗೆ ಹಾಜರಾಗಲು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ನಟ ಸೋನು ಸೋದ್ ತಮ್ಮ ದಿವಂಗತ ತಾಯಿ ಸರೋಜ್ ಸೂದ್ ಹೆಸರಲ್ಲಿ ವಿದ್ಯಾರ್ಥಿವೇತನ ನೀಡಲು ಮುಂದಾಗಿದ್ದಾರೆ.