ಕರ್ನಾಟಕ

karnataka

ETV Bharat / bharat

ಎಸ್​.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ: ಪುತ್ರ ಚರಣ್​ ಮಾಹಿತಿ

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಗಸ್ಟ್​ 5ರಂದು ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

SP Balasubrahamanyam
SP Balasubrahamanyam

By

Published : Aug 20, 2020, 6:52 PM IST

ಚೆನ್ನೈ:ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಹೆಲ್ತ್​ ಕೇರ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಗಾಯಕ ಎಸ್​​.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಯಾವುದೇ ರೀತಿಯ ಚೇತರಿಕೆ ಕಾಣಿಸಿಕೊಂಡಿಲ್ಲ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿಬಿ ಚೇತರಿಕೆಗಾಗಿ ಚಿತ್ರ ಕಲಾವಿದರು, ನಟರು, ಖ್ಯಾತ ಗಾಯಕರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಧ್ಯೆ ಅವರ ಮಗ ಚರಣ್​ ತಂದೆಯ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

'ಅಪ್ಪ ಆದಷ್ಟು ಬೇಗ ಗುಣಮುಖರಾಗಿ ಮನೆಗೆ ಮರಳಲಿ ಎಂದು ನಟ-ನಟಿಯರು, ಗಾಯಕರು ಸೇರಿದಂತೆ ಎಲ್ಲ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿರುವುದು ನಿಜಕ್ಕೂ ಖುಷಿ ನೀಡಿದೆ. ನಮ್ಮ ತಂದೆಯ ಮೇಲೆ ನೀವು ತೋರುತ್ತಿರುವ ಪ್ರೀತಿಗೆ ಯಾವುದೇ ರೀತಿಯಲ್ಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾವು ಯಾವಾಗಲೂ ಇದಕ್ಕೆ ಆಭಾರಿ' ಎಂದು ಭಾವನಾತ್ಮಕವಾಗಿ ನುಡಿದಿದ್ದಾರೆ.

ನಿಮ್ಮೆಲ್ಲರ ಪ್ರಾರ್ಥನೆ ದೇವರಿಗೆ ಮುಟ್ಟಿ, ನಮ್ಮ ತಂದೆ ಆದಷ್ಟು ಬೇಗ ಗುಣಮುಖರಾಗುವಂತೆ ಶ್ರೀರಕ್ಷೆ ನೀಡಲಿ ಎಂದು ಇದೇ ವೇಳೆ ಕೇಳಿಕೊಂಡಿದ್ದಾರೆ.

ABOUT THE AUTHOR

...view details