ನವದೆಹಲಿ: ಒಂದೆಡೆ ಚೀನಾದಿಂದ ಅತ್ಯಾಧುನಿಕ ಡ್ರೋಣ್‌ಗಳನ್ನು ಪಾಕಿಸ್ತಾನ ಖರೀದಿಸುತ್ತಿದ್ದರೆ, ಇತ್ತ ಭಾರತ ತಾನೇನೂ ಕಡಿಮೆ ಇಲ್ಲ ಎಂದು ತೋರಿಸಿದೆ. ಅಮೆರಿಕಾದಿಂದ ಭಾರಿ ಪ್ರಮಾಣದ ಯುದ್ಧ ಸಾಮಗ್ರಿಗಳನ್ನು ಖರೀದಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಅಮೆರಿಕದ ರಕ್ಷಣಾ ಇಲಾಖೆಯಿಂದ 1 ಸಾವಿರ ಕೋಟಿ ಮೊತ್ತದ ಯುದ್ಧ ಸಾಮಗ್ರಿಗಳನ್ನು ಖರೀದಿಸುವ ಸಂಬಂಧದ ಪ್ರಸ್ತಾವನೆ ಬಗ್ಗೆ ಚರ್ಚಿಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.