ವಾರಣಾಸಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ದಿನಗಣನೆ ಆರಂಭವಾಗಿದ್ದು, ಇದಕ್ಕಾಗಿ ಇಡೀ ದೇಶ ಕಾತುರದಿಂದ ಕಾಯುತ್ತಿದೆ. 500 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇದೇ ಆ. 5 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ.
ಅಂದಿನ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ವಿಶೇಷವಾಗಿ ತಯಾರಿಸಲಾದ ಶಲ್ಯವೊಂದನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಇದರ ಮೇಲೆ ಭಗವಂತ ಶ್ರೀರಾಮನ ಹೆಸರನ್ನು ನೇಯಲಾಗಿದ್ದು, ಶ್ರೀರಾಮ ಮಂದಿರ ನಿರ್ಮಾಣದ ಸಾಕಾರಕ್ಕೆ ಕಾರಣಕರ್ತರಾದ ಪ್ರಧಾನಿ ಮೋದಿಯವರಿಗೆ ಈ ಶಲ್ಯವನ್ನು ಕೃತಜ್ಞತಾಪೂರ್ವಕವಾಗಿ ಅರ್ಪಿಸಲಾಗುವುದು.