ಅಮೃತಸರ್( ಪಂಜಾಬ್):ಪಂಜಾಬ್ನ ಗುರುದಾಸ್ ಪುರ ಜಿಲ್ಲೆಯ ತರನ್ ತಾರನ್ ಮತ್ತು ಬಟಾಲಾದಲ್ಲಿ ನಕಲಿ ಮದ್ಯ ಸೇವನೆ ಮಾಡಿ ಸಾವನ್ನಪ್ಪಿದವರ ಸಂಖ್ಯೆ 45ಕ್ಕೆ ಏರಿಕೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.
ನಕಲಿ ಮದ್ಯ ಸೇವನೆ - 45ಮಂದಿ ಸಾವು; ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ
ನಕಲಿ ಮದ್ಯ ಸೇವನೆ ಮಾಡಿ 45 ಜನ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.
liquor
ಪ್ರಕರಣದ ಹಿನ್ನೆಲೆ: ತಾರ್ಸಿಕಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಚಾಲ್ ಗ್ರಾಮದಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಮೊದಲು ಬೆಳಕಿಗೆ ಬಂದಿತ್ತು. ಸಾವಿನ ಸಂಖ್ಯೆ 45ಕ್ಕೆ ಏರಿಕೆ ಆಗಿದೆ. ಈ ಮದ್ಯ ಕುಡಿದವರೆಲ್ಲ ಬಡವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಗ್ರಾಮದ ಅನೇಕ ಮನೆಗಳಲ್ಲಿ ಈ ಮದ್ಯ ಮಾರಾಟವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದರು. ಪೊಲೀಸ್ ಇಲಾಖೆ ನಿರ್ಲಕ್ಷ್ಯವೇ ಇಷ್ಟಕ್ಕೆಲ್ಲ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಭಾರಿ ಸದ್ದು ಮಾಡುತ್ತಿದೆ.