ಶ್ರೀನಗರ: ಇಲ್ಲಿನ ರಾಂಬಾಗ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಇಬ್ಬರು ಉಗ್ರರನ್ನು ಯೋಧರು ಹೆಡೆಮುರಿ ಕಟ್ಟಿದ್ದಾರೆ.
ಶ್ರೀನಗರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಯೋಧರು - ಭಾರತೀಯ ಸೇನೆ ಸಂಬಂಧಿತ ಸುದ್ದಿ
ಶ್ರೀನಗರದ ರಾಂಬಾಗ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಬೇಟೆಯಾಡಿದೆ.
ಗುಂಡಿನ ಚಕಮಕಿ
ಲಷ್ಕರ್-ಇ-ತೊಯ್ಬಾ ಸಂಘಟನೆ ಓರ್ವ ಸೇರಿ ಇಬ್ಬರು ಭಯೋತ್ಪಾದಕರನ್ನು ಸೈನಿಕರು ಬೇಟೆಯಾಡಿದ್ದಾರೆ. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಪೊಲೀಸ್ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸ್ಥಳಕ್ಕೆ ತೆರಳುತ್ತಿದ್ದಂತೆ ಅಲ್ಲಿ ಅಡಗಿ ಕುಳಿತಿದ್ದ ಉಗ್ರರು ಗುಂಡು ಹಾರಿಸಲು ಮುಂದಾಗಿದ್ದು, ಭಾರತೀಯ ಸೈನಿಕರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದು, ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ.
Last Updated : Oct 12, 2020, 12:24 PM IST