ನವದೆಹಲಿ: ದೂರದ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ವಿಶೇಷ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ವೈದ್ಯಕೀಯ ಪಿಜಿ ಪ್ರವೇಶಾತಿಯಲ್ಲಿ ಮೀಸಲಾತಿ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಸುಪ್ರೀಂ - States have power to provide quota in PG admissions to govt doctors serving in remote areas
ದೂರದ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರಿಗೆ ಪಿಜಿ ಪ್ರವೇಶಾತಿಯಲ್ಲಿ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

supreme
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ, ಇಂದಿರಾ ಬ್ಯಾನರ್ಜಿ, ವಿನೀತ್ ಸರನ್, ಎಂ.ಆರ್.ಶಾ, ಮತ್ತು ಅನಿರುದ್ಧ ಬೋಸ್ ಅವರನ್ನು ಒಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.
ಮೀಸಲಾತಿ ಸೌಲಭ್ಯಗಳನ್ನು ನೀಡುವುದರಿಂದ ಸರ್ಕಾರಿ ಆಸ್ಪತ್ರೆಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಉತ್ತೇಜಿಸಿದಂತಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.