ನವದೆಹಲಿ:ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿದ ನಡೆ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಪಾಕ್ ಮೂಲದ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನ ಮೂಲದ ಜೈಶೆ ಉಗ್ರ ಸಂಘಟನೆ ಪುಲ್ವಾಮಾ ಮಾದರಿ ದಾಳಿಗೆ ಸಂಚು ರೂಪಿಸಿದ್ದು, ಕಣಿವೆ ರಾಜ್ಯ ಸೇರಿದಂತೆ ದೇಶದ ವಿವಿಧ ಏಳು ರಾಜ್ಯಗಳಲ್ಲಿ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸುವ ಸಾಧ್ಯತೆ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.