ಕರ್ನಾಟಕ

karnataka

ETV Bharat / bharat

ದೆಹಲಿಯಲ್ಲಿ ಮತ್ತೆ ಹಿಂಸಾಚಾರ ಸ್ವರೂಪ ಪಡೆದ ಪ್ರತಿಭಟನೆ, ಗುಂಪುಗಳ ನಡುವೆ ಕಲ್ಲುತೂರಾಟ - ದೆಹಲಿ ಗುಂಪುಗಳ ನಡುವೆ ಕಲ್ಲುತೂರಾಟ ಸುದ್ದಿ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ. ಇಂದು ಸಹ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Stone pelting  between two groups in Delhi
ದೆಹಲಿ ಹಿಂಸಾಚಾರ

By

Published : Feb 25, 2020, 3:26 PM IST

ನವದೆಹಲಿ: ಸಿಎಎ, ಎನ್‌ಆರ್‌ಸಿ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಗುಂಪುಗಳ ನಡುವೆ ಕಲ್ಲುತೂರಾಟ

ನಿನ್ನೆ ನಡೆದಿದ್ದ ಗಲಭೆಯಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದ್ದು, ಈಶಾನ್ಯ ದೆಹಲಿಯ ಭಜನ್‌ಪುರ್ ಚೌಕ್‌ ಬಳಿ ಇಂದು ಸಹ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ, ಸಂಚಾರ ದಟ್ಟಣೆ ತಪ್ಪಿಸಲು ಸಲುವಾಗಿ ಕಾರವಾಲ್‌ ನಗರದ ರಸ್ತೆಯನ್ನು ಬಂದ್‌ ಮಾಡಿದ್ದಾರೆ.

ಸದ್ಯ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಹಬದಿಗೆ ಬಂದಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ.

ABOUT THE AUTHOR

...view details