ಉನಾ ( ಹಿಮಾಚಲ ಪ್ರದೇಶ ) :ಕಳೆದ ಮೂರು ತಿಂಗಳಿನಿಂದ ಕೆಲಸವಿಲ್ಲದೇ ಕುವೈತ್‌ನಲ್ಲಿ ಸಿಲುಕಿರುವ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಇಂಜಿನಿಯರ್ ರಿಷಬ್ ಶರ್ಮಾ ಭಾರತಕ್ಕೆ ಮರಳಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಪೂರ್ವ ನಿಗದಿಯಂತೆ ಏಪ್ರಿಲ್ 6 ರಂದು ರಿಷಬ್ ಶರ್ಮಾ ತಾಯ್ನಾಡಿಗೆ ಹಿಂದಿರುಗಬೇಕಿತ್ತು. ಆದರೆ, ಕೊರೊನಾ ವೈರಸ್ ನಿಯಂತ್ರಿಸಲು ಮಾರ್ಚ್ 25 ರಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಜಾರಿಯಾದ ಹಿನ್ನೆಲೆ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳು ರದ್ದಾದವು. ಹೀಗಾಗಿ ಊರಿಗೆ ಹಿಂದಿರುಗಲಾಗದೇ ಅವರು ಅಲ್ಲೇ ಸಿಲುಕಿಕೊಂಡಿದ್ದಾರೆ.