ಬಾಂದಾ (ಉತ್ತರ ಪ್ರದೇಶ): ಶುಲ್ಕ ಪಾವತಿಸದ ಕಾರಣ ವಿದ್ಯಾರ್ಥಿನಿಯನ್ನು ಶಾಲೆಯಿಂದ ಹೊರ ಹಾಕಿದ್ದಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಫೀಸ್ ಕಟ್ಟದ ಹಿನ್ನೆಲೆ ವಿದ್ಯಾರ್ಥಿನಿಯನ್ನು ಶಾಲೆಯಿಂದ ಹೊರ ಹಾಕಲಾಗಿತ್ತು. ಹಾಗಾಗಿ ಅವಳು ಸೂಸೈಡ್ ಮಾಡಿಕೊಂಡಿದ್ದಾಳೆ ಅಂತಾ ಪೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳಿಸಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಶುಲ್ಕ ಪಾವತಿಸದಿದ್ದಕ್ಕೆ ಸ್ಕೂಲ್ನಿಂದ ಹೊರ ಹಾಕಿದ ಆರೋಪ.. ವಿದ್ಯಾರ್ಥಿನಿ ಸೂಸೈಡ್ ಬಾಬೆರುವ ವಿದ್ಯಾ ಮಂದಿರ ಇಂಟರ್ ಕಾಲೇಜಿನಲ್ಲಿ 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಫೀಸ್ ಕಟ್ಟದ ಕಾರಣ ಅರ್ಧವಾರ್ಷಿಕ ಪರೀಕ್ಷೆಗೆ ಹಾಜರಾಗಲು ಆಡಳಿತ ಮಂಡಳಿ ಅನುಮತಿ ಕೊಟ್ಟಿಲ್ಲ. ಈ ಹಿನ್ನೆಲೆ ಬೇಸರಗೊಂಡು ಅಪ್ರಾಪ್ತೆ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗ್ತಿದೆ.
ಪೋಷಕರ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಸತ್ಯಾಸತ್ಯತೆ ತಿಳಿದು ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪ್ರತಾಪ್ ಚೌಹಾಣ್ ಹೇಳಿದ್ದಾರೆ.